ಉಡುಪಿ ಮಠದ ಶ್ರೀಗಳು ಇನ್ನಿಲ್ಲ

ಉಡುಪಿ ಮಠದ ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಶ್ರೀಪಾದಂಗಳವರ ನಿಧನ

ಅವರ ಅಂತಿಮ ಸಂಸ್ಕಾರ ಅವರ ಇಚ್ಛೆಯಂತೆ ಬೆಂಗಳೂರಿನಲ್ಲಿ ನಡೆಯಲಿದೆ ಎಂದು ತಿಳಿದು ಬಂದಿದೆ.

ಈಗಾಗಲೇ ಉಡುಪಿಯಿಂದ ಅವರ ಪಾರ್ಥಿವ ಶರೀರವನ್ನು ವಿಮಾನದ ಮೂಲಕ ಬೆಂಗಳೂರಿಗೆ ಕೊಂಡೊಯ್ದು ಗಣ್ಯರು ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇಡಲಾಗುವುದು. ಹಲವಾರು ರಾಷ್ಟ್ರೀಯ ನಾಯಕರು ಶ್ರೀಗಳ ಅಂತಿಮ ದರ್ಶನಕ್ಕೆ ಆಗಮಿಸುವ ನಿರೀಕ್ಷೆ ಇದೆ. ಇಂದೇ ರಾತ್ರಿ ಅಂತಿಮ ಸಂಸ್ಕಾರ ನಡೆಯಲಿದೆ ಎಂದು ತಿಳಿದು ಬಂದಿದೆ

ಇನ್ನೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಈಗಾಗಲೆ ಶ್ರೀಮಠಕ್ಕೆ ಆಗಮಿಸಿದ್ದಾರೆ. ರಾಜ್ಯದಲ್ಲಿ 3 ದಿನ ಶೋಕಾಚರಣೆ ನಡೆಸಲಾಗುವುದು. ಸಕಲ ಸರಕಾರಿ ಗೌರವಗಳೊಂದಿಗೆ ಶ್ರೀಗಳ ಅಂತಿಮ ಸಂಸ್ಕಾರ ನಡೆಸಲಾಗುವುದು ಎಂದು ಯಡಿಯೂರಪ್ಪ ತಿಳಿಸಿದ್ದಾರೆ.

Published by Royal TV

Royal tv Kannada news online website channel

Leave a comment

Design a site like this with WordPress.com
Get started