ಬಾಲ ಮಂದಿರ ಮಕ್ಕಳೊಂದಿಗೆ ಹೊಸ ವರ್ಷಾಚರಣೆ ಮಾಡಿದ ಜಿಲ್ಲಾ ಅಧಿಕಾರಿ ವೈ ಎಸ್ ಪಾಟೀಲ

ವಿಜಯಪುರ ಜಿಲ್ಲೆಯ ಸುದ್ದಿ:

ವಿಜಯಪುರ: ಮಾನ್ಯ ಜಿಲ್ಲಾಧಿಕಾರಿ ವೈ ಎಸ್ ಪಾಟೀಲ ಹಾಗೂ ಉಪವಿಭಾಗಾಧಿಕಾರಿಗಳಾದ ಮಾನ್ಯ ಸೋಮಲಿಂಗ ಗೆಣ್ಣೂರು ಅವರು ಜಿಲ್ಲಾ ಮಕ್ಕಳ ರಕ್ಷಣಾ ಘಟಕದಡಿ ಕಾರ್ಯನಿರ್ವಹಿಸುತ್ತಿರುವ ಬಾಲಮಂದಿರಗಳ 142 ಮಕ್ಕಳೊಂದಿಗೆ ಹೊಸ ವರ್ಷಾಚರಣೆ ಮಾಡಿ ಸಂಭ್ರಮಿಸಿದರು. ಅಲ್ಲದೇ ಕಂಪ್ಯೂಟರ್ ಲ್ಯಾಬ್ ಹಾಗೂ ಗ್ರಂಥಾಲಯ ಉದ್ಘಾಟನೆ ಮಾಡಿದರು.

ಈ ಸಂದರ್ಭದಲ್ಲಿ ಬಾಲ ಮಂದಿರಗಳಿಗೆ ದೇಣಿಗೆ ನೀಡಿದ ದಾನಿಗಳನ್ನು ಜಿಲ್ಲಾ ಮಕ್ಕಳ ರಕ್ಷಣಾ ಘಟಕದಿಂದ ಸನ್ಮಾನಿಸಿದರು.
ಜಿಲ್ಲಾಧಿಕಾರಿಗಳು ತಮ್ಮ ಕೆಲಸದ ಒತ್ತಡದಲ್ಲೂ 2 ಘಂಟೆಗಳವರೆಗೆ ಕಾಲ ಬಾಲಮಂದಿರದ ಮಕ್ಕಳ ಜೊತೆ ಕಾಲಕಳೆದು ಅವರ ಕುರಿತು ಮಾತನಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ವೈ ಎಸ ಪಾಟೀಲ,ಜಿಲ್ಲಾ ಉಪವಿಭಾಗಾಧಿಕಾರಿ ಸೋಮಲಿಂಗ ಗೆನ್ನೂರ, ಮಹಿಳಾ ಮಕ್ಕಳ ಕಲ್ಯಾಣ ಇಲಾಖೆಯ ಶ್ರೀಮತಿ ನಿರ್ಮಲಾ ಸುರಪುರ, ಹಾಗೂ ಆಡಳಿತ ಮಂಡಳಿ ಬಾಲ ಮಂದಿರದ ಮಕ್ಕಳು ಸೇರಿದಂತೆ ಹಲವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ವರದಿ:ಸಾಗರ ಉಕ್ಕಲಿ

Published by Royal TV

Royal tv Kannada news online website channel

Leave a comment

Design a site like this with WordPress.com
Get started