
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕು ಶ್ರೀ ಆದಿಚುಂಚನಗಿರಿ ವಿಶ್ವವಿದ್ಯಾಲಯ ಕ್ಷೇತ್ರಕ್ಕೆ ಒಳಪಟ್ಟಿರುವ ವೈದ್ಯಕೀಯ ಮಹಾವಿದ್ಯಾಲಯ ಬಿಜಿಎಸ್ ಶಿಕ್ಷಣ ಮಹಾವಿದ್ಯಾಲಯ ಹಾಗೂ ಬಿಜಿಎಸ್ ಪ್ರಥಮ ದರ್ಜೆ ಮಹಾವಿದ್ಯಾಲಯಗಳ ಪರವಾಗಿ ಹಳೆ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮವನ್ನು ದಿನಾಂಕ 25.01.2020 ರಂದು ಆಯೋಜಿಸಲಾಗಿದೆ ಎಂದು ವೈದ್ಯಕೀಯ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ ಎಂ ಜೆ ಶಿವರಾಮ್ ಅವರು ತಿಳಿಸಿದ್ದಾರೆ.
ಈ ಕಾರ್ಯಕ್ರಮಕ್ಕೆ ನಮ್ಮ ರಾಜ್ಯ ಹಾಗೂ ಇಪ್ಪತ್ತೈದು ಹೊರ ರಾಜ್ಯಗಳಿಂದ ಸುಮಾರು ಒಂದು ಸಾವಿರ ವಿದ್ಯಾರ್ಥಿಗಳು ಆಗಮಿಸಲಿದ್ದಾರೆ ಎಂದು ತಿಳಿಸಿದರು ನಂತರ ನಮ್ಮ ಮಹಾವಿದ್ಯಾಲಯದ ವಿದ್ಯಾರ್ಥಿಗಳು ದೇಶ ವಿದೇಶಗಳ ಘನ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವುದು ನಮಗೆ ಹೆಮ್ಮೆ ತಂದಿದೆ ಎಂದು ಹೇಳಿದರು.
ಈ ಕಾರ್ಯಕ್ರಮವು ಪರಮಪೂಜ್ಯ ಜಗದ್ಗುರು ಶ್ರೀ ಡಾ ನಿರ್ಮಲನಾಥ ಮಹಾ ಸ್ವಾಮೀಜಿಯವರ ಅಧ್ಯಕ್ಷತೆಯಲ್ಲಿ ನೆರವೇರಲಿದ್ದು ಮೂಡಬಿದರೆ ಆಳ್ವಾ ಸಂಸ್ಥೆಗಳ ಅಧ್ಯಕ್ಷರಾದ ಡಾ ಮೋಹನ್ ಆಳ್ವಾರ ರವರ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಉದ್ಘಾಟನಾ ಸಮಾರಂಭದ ನಂತರ ಆಯಾ ಕಾಲೇಜಿನಲ್ಲಿ ಈಗಿರುವ ವಿದ್ಯಾರ್ಥಿಗಳು ಪೋಷಕರೊಡನೆ ನಮ್ಮ ಹಳೆಯ ವಿದ್ಯಾರ್ಥಿಗಳು ಸಂವಾದ ನಡೆಸಲಿದ್ದಾರೆ ಎಂದು ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಕುಲಸಚಿವರಾದ ಶ್ರೀ ಬಿ ಕೆ ಉಮೇಶ್ ಹಾಗೂ ಡಾಕ್ಟರ್ ಅಜಯ್ ಉಪಸ್ಥಿತರಿದ್ದರು.
ವರದಿ:ಜಗದೀಶ ನಾಗಮಂಗಲ