
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಕವಡಿಮಟ್ಟಿ ಗ್ರಾಮದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆ ಎಸ್ ಈಶ್ವರಪ್ಪ ಅವರಿಂದ ಅನಾವರಣಗೊಳ್ಳಲು ಸಿದ್ದವಾಗಿದ್ದ, ಶ್ರೀ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣನ ಮೂರ್ತಿ ಅನಾವರಣ ಕಾರ್ಯಕ್ರಮ ಮುಂದೂಡಲಾಗಿದೆ. ಎಂದು ತಾಲ್ಲೂಕು ಕುರುಬರ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಮದರಿ ಹೇಳಿದ್ದಾರೆ.ಇನ್ನೂ ಈ ಕಾರ್ಯಕ್ರಮದ ಸಿದ್ದತೆಗೆ ತಗುಲಿದ ವೆಚ್ಚದಲ್ಲಿ ಸುಮಾರು ಐದು ಲಕ್ಷ ರೂಪಾಯಿ ನಷ್ಟವಾಗಿದೆ ಎಂದು ಹೇಳಿದರು.
ರಾಜ್ಯಕ್ಕೂ ವ್ಯಾಪಿಸಿರುವ ಕರೋನಾ ವೈರಸ್ ನಿಂದ ಹೆಚ್ಚಿನ ಅಪಾಯ ತಪ್ಪಿಸಲು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಇಂದು ತುರ್ತಾಗಿ ರಾಜ್ಯದಲ್ಲಿ ಜನದಟ್ಟಣೆಯ ಸಭೆ ಸಮಾರಂಭಗಳನ್ನು ನಡೆಸದಂತೆ ಆದೇಶ ಹೊರಡಿಸಿದ್ದಾರೆ.ಈ ಕಾರಣಕ್ಕಾಗಿ ಈ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂದು ಹೇಳಿದರು.
ರಾಯಲ್ ಟಿವಿ ನ್ಯೂಸ್ ವಿಜಯಪುರ, ನಿಮ್ಮ ಸುದ್ದಿಗಳನ್ನು ನೀಡಲು ಸಂಪರ್ಕಿಸಿ-8792900064
Published by Royal TV
Royal tv Kannada news online website channel
View more posts