
ರಾಜ್ಯದಲ್ಲಿ ಕೊರೋನ ವೈರಸ್ ಭೀತಿ ಹೆಚ್ಚಾಗಿರುವುದರಿಂದ ವಿಜಯಪುರದಲ್ಲಿ ಜಗತ್ಪ್ರಸಿದ್ಧ ಗೋಳಗುಮ್ಮಟ ಸೇರಿ ಐತಿಹಾಸಿಕ ಸ್ಮಾರಕಗಳ ವೀಕ್ಷಣೆಗೆ ಸರ್ಕಾರದ ಆದೇಶದಂತೆ ನಿಷೇಧ ಹೇರಲಾಗಿದೆ. ವಿಜಯಪುರದ ಐತಿಹಾಸಿಕ ಸ್ಥಳಗಳಿಗೆ ಪ್ರವೇಶ ನಿಷೇಧಿಸಿ ಜಿಲ್ಲಾಧಿಕಾರಿ ವೈ ಎಸ್ ಪಾಟೀಲ್ ಆದೇಶ ಹೊರಡಿಸಿದ್ದಾರೆ.
ವಿಜಯಪುರದ ಐತಿಹಾಸಿಕ ಗೋಳಗುಮ್ಮಟ, ಇಬ್ರಾಹಿಂ ರೋಜಾ, ಬಾರಾಕಮಾನ್, ಉಪ್ಪಲಿಬುರ್ಜ್ ವೀಕ್ಷಣೆಗೆ ನಿಷೇಧಿಸಲಾಗಿದೆ. ಜಿಲ್ಲಾಧಿಕಾರಿ ವೈ ಎಸ್ ಪಾಟೀಲರ ಆದೇಶವನ್ನು ಭಾರತೀಯ ಪುರಾತತ್ವ ಇಲಾಖೆ ಪುರಸ್ಕರಿಸಿ ಒಂದು ವಾರಗಳ ಕಾಲ ಪ್ರವೇಶ ನಿಷೇಧಿಸಿದ್ದಾರೆ.
ರಾಯಲ್ ಟಿವಿ ನ್ಯೂಸ್ ವಿಜಯಪುರ ನಿಮ್ಮ ಸುದ್ದಿಗಳನ್ನು ನೀಡಲು ಸಂಪರ್ಕಿಸಿ-8792900064
Published by Royal TV
Royal tv Kannada news online website channel
View more posts