
ಚಾಲೆಂಜಿಂಗ್ ಸ್ಟಾರ್ ದರ್ಶನ ಅವರು ಈ ಮಾರಕ ಕೊರೋನ ವೈರಸ್ ಸೋಂಕು ನಿಯಂತ್ರಣಕ್ಕೆ ತಮ್ಮ ಮನದ ಮಾತನ್ನು ಹೇಳಿದ್ದಾರೆ. ಜಾಗೃತರಾಗಿ ಜನಗಳೆ.
ಎಲ್ಲಾ ಭಾರತೀಯರಲ್ಲೂ ನನ್ನ ಕಳಕಳಿಯ ವಿನಂತಿ. ಈ ಮಾರಕವಾದ ಕರೋನ ವೈರಸ್ ಇಂದ ಪಾರಾಗುವುದು ನಮ್ಮ ಮೊದಲ ಆಧ್ಯತೆ ಆಗಿರಬೇಕು. ಈ ವೈರಸ್ ಬಗ್ಗೆ ಜನಸಾಮಾನ್ಯರಲ್ಲಿ ಅರಿವು ಮೂಡಿಸಲು ಗವರ್ನಮೆಂಟ್, ಡಾಕ್ಟರ್ಸ್, ಪೊಲೀಸ್ ಸಿಬ್ಬಂದಿಗಳು ಹಗಲಿರುಳು ಶ್ರಮಿಸುತ್ತಿದ್ದಾರೆ.
ದಯಮಾಡಿ ನಿಮ್ಮ ಫ್ಯಾಮಿಲಿ ಗಾಗಿ, ನಿಮ್ಮ ನೆರೆ ಹೊರೆಯ ಗೆಳೆಯರಿಗಾಗಿ, ನಮಗಾಗಿ ಆದಷ್ಟು ನಿಮ್ಮ ಮನೆಯಲ್ಲಿ ಸುರಕ್ಷಿತವಾಗಿರಿ. ಈ ಸೋಂಕು ರೋಗ ಬಹಳ ಅಪಾಯಕಾರಿ ಎಂಬುದು ನಿಮಗೆ ತಿಳಿದರೂ ಸಹ ತಮ್ಮ ಊರುಗಳಿಗೆ ಹೋಗುವುದು, ಹಬ್ಬಕ್ಕಾಗಿ ಸಂಚರಿಸುವುದು ಮಾಡದಿರಿ.
ನಿಮ್ಮ ಈ ಕೃತ್ಯದಿಂದ ಇಡೀ ದೇಶವೇ ಮಾರಣಹೋಮಕ್ಕೆ ತುತ್ತಾಗುವಂತೆ ಮಾಡದಿರಿ. ಇಟಲಿ ಸ್ಪೇನ್ ದೇಶಗಳಲ್ಲಿ ಜಾಗೃತಕ್ರಮಗಳನ್ನು ಮೊದಲೇ ಸರಿಯಾಗಿ ಪಾಲಿಸದೆ ಆಗುತ್ತಿರುವ ಅನಾಹುತಗಳು ನಿಮ್ಮ ಕಣ್ಣ ಮುಂದಿವೆ. ನಿಮ್ಮ ಕರ್ತವ್ಯ ಮನೆಯಲ್ಲಿಯೇ ಇದ್ದು ದೇಶದ ಹಿತಕ್ಕಾಗಿ ಎಲ್ಲಾ ನಿಯಮಗಳನ್ನು ಪಾಲಿಸುವುದು. ಇದನ್ನು ದಯಮಾಡಿ ನೆರವೇರಿಸಿಕೊಡಿ.’Common sense is not common’ ಎನ್ನುವ ಹಾಗೆ ಮಾಡಬೇಡಿ.
Please behave like a responsible citizen of the country.
ರಾಯಲ್ ಟಿವಿ ನ್ಯೂಸ್ ವೀಕ್ಷಿಸಿ ನಿಮ್ಮ ಸುದ್ದಿಗಳನ್ನು ನಮಗೆ ನೀಡಲು ಸಂಪರ್ಕಿಸಿ-8792900064
Published by Royal TV
Royal tv Kannada news online website channel
View more posts