
ವಿಜಯಪುರ: ರಾಜ್ಯಾದ್ಯಂತ ವ್ಯಾಪಕವಾಗಿ ಹರಡುತ್ತಿರುವ ಮಾರಕ ಕೋರನ ಕೋವಿಡ_19 ನ ವೈರಸ್ ನಿಯಂತ್ರಿಸುವ ಸಲುವಾಗಿ ನಾಗಠಾಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ದೇವಾನಂದ ಫೂ ಚವ್ಹಾಣ ರವರು ದಿನಾಂಕ 28-03-2020 ರಂದು ವಿಜಯಪುರ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಜಿಲ್ಲಾಧಿಕಾರಿಗಳ ಮುಖಾಂತರ ಮಾನ್ಯ ಮುಖ್ಯಮಂತ್ರಿಗಳ ಪರಿಹಾರ ನಿಧಿ ಖಾತೆಗೆ ರೂ 200000/- ಲಕ್ಷಗಳ ಚೆಕ್ ನೀಡುವ ಮೂಲಕ ವೈಯಕ್ತಿಕ ಪರಿಹಾರ ನೀಡಿ ಮಾನವಿಯತೆ ಮೆರೆದರು.
ಅದರಂತೆ ಮಹಾರಾಷ್ಟ್ರ ಮತ್ತು ಗೋವಾ ಸೇರಿದಂತೆ ಇನ್ನಿತರ ರಾಜ್ಯಗಳಿಗೆ ದುಡಿಯಲು ವಲಸೆ ಹೋಗಿ ಸಂಕಷ್ಟದಲ್ಲಿರುವ ಜನರನ್ನು ಸೂಕ್ತ ವೈದ್ಯಕೀಯ ತಪಾಸಣೆಗೊಳಪಡಿಸಿ ಕೊರೋನ ಸೋಂಕು ಹರಡದಿರುವುದನ್ನ ದೃಢಪಡಿಸಿಕೊಂಡು ಅವರನ್ನು ಮರಳಿ ಅವರ ಸ್ವಗ್ರಾಮಗಳಿಗೆ ಕಳುಹಿಸಿಕೊಡುವಂತೆ ಮನವಿ ಮಾಡಿಕೊಂಡಿದ್ದು. ಇದು ಸಾಧ್ಯವಾಗದಿದ್ದಲ್ಲಿ ಅವರಿಗೆ ಅವರಿರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಮುಖಾಂತರ ಸರಕಾರದಿಂದ ಗಂಜಿ ಕೇಂದ್ರಗಳನ್ನು ತೆರೆದು ಸೂಕ್ತ ಮೂಲಭೂತ ಸೌಕರ್ಯ ಒದಗಿಸುವಂತೆ ಕೋರಿಕೆ ಸಲ್ಲಿಸಿದರು.
ರಾಯಲ್ ಟವಿ ನ್ಯೂಸ್ ವಿಜಯಪುರ ವೀಕ್ಷಿಸಿ ನಿಮ್ಮ ಸುದ್ದಿಗಳನ್ನು ನೀಡಲು ಸಂಪರ್ಕಿಸಿ-8792900064
Published by Royal TV
Royal tv Kannada news online website channel
View more posts